ಬೆಂಗಳೂರು ನಗರದ ಗೋವಿಂದಪುರ ರೈಲ್ವೆ ಗೇಟ್ ಬಳಿ ರೈಲಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ಸುಮಾರು 4:20ರ ವೇಳೆಯಲ್ಲಿ ಯಶವಂತಪುರದಿಂದ ಮಡಗಾಂವ್ ಕಡೆಗೆ ಹೋಗುತ್ತಿದ್ದ ರೈಲಿಗೆ ವ್ಯಕ್ತಿಯೊಬ್ಬರು ಬಿದ್ದಿದ್ದಾರೆ.
ಘಟನೆಯ ನಿಖರ ಕಾರಣ ಹಾಗೂ ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ. ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
















