ಬೆಂಗಳೂರು: ನೀವು ಬೆಳಗಾವಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ (HLL Lifecare Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಟ್ರೈನಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಉದ್ಯೋಗ ಸ್ಥಳ: ಬೆಳಗಾವಿ
ಹುದ್ದೆಯ ಹೆಸರು: ಗ್ರಾಜ್ಯುಯೇಟ್ ಟ್ರೈನಿ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 27
ಗ್ರಾಜ್ಯುಯೇಟ್ ಟ್ರೈನಿ, ಫಾರ್ಮಾಸಿಸ್ಟ್ ಟ್ರೈನಿ ಹಾಗೂ ಐಟಿಐ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಬಿ ಫಾರ್ಮಾ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವವರಿಗೆ 35 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 18 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು,
ಅರ್ಜಿ ಸಲ್ಲಿಸಬೇಕಾದ ವಿಳಾಸ
GENERAL MANAGER OPERATIONS & UNIT CHIEF, HLL LIFECARE LIMITED, KANAGALA – 591 225


















