ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್-ಎ-ಜರ್ನಿ ಆಫ್ ಲವ್’ ಪುಸ್ತಕ ಇಂದು ಅಧಿಕೃತವಾಗಿ ಬಿಡುಗಡೆಯಾಗುತ್ತಿದೆ. ನವದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 10ರಂದೇ ಈ ಪುಸ್ತಕ ದೇಶಾದ್ಯಂತ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು.
ಕಾರ್ಯಕ್ರಮಕ್ಕೆ ಪ್ರಕಾಶಕರು ಹಾಗೂ ಗಾಂಧಿ ಕುಟುಂಬ ಸೇರಿದಂತೆ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಲಿದ್ದಾರೆ. ಇವರೊಂದಿಗೆ ಸಿಎಂ ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು ಕೂಡ ಪಾಲ್ಗೊಳ್ಳಲಿದ್ದಾರೆ.



















