ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು (ISRO Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 400
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 26
ಉದ್ಯೋಗ ಸ್ಥಳ: ಶ್ರೀಹರಿಕೋಟಾ, ಆಂಧ್ರಪ್ರದೇಶ
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ www.apprenticeship.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.


















