ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಸಂಸ್ಥೆಯಲ್ಲಿ ಖಾಲಿ ಇರುವ 500 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ (IOCL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 500
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 5
ಉದ್ಯೋಗ ಸ್ಥಳ: ದೇಶಾದ್ಯಂತ
ಕರ್ನಾಟಕದ ಬೆಂಗಳೂರು ಸೇರಿ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದು. ಟೆಕ್ನಿಶಿಯನ್ ಇಂಟರ್ನ್ ಶಿಪ್ ಹಾಗೂ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಪದವಿ ಹಾಗೂ ಐಟಿಐ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು https://plapps.indianoilpipelines.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿ ಹೊಂದಿದವರಿಗೆ ಒಂದು ವರ್ಷದವರೆಗೆ ತರಬೇತಿ ನೀಡಲಾಗುತ್ತದೆ.



















