ಬೆಂಗಳೂರು: ಐಷಾರಾಮಿ ಕಾರುಗಳ ತಯಾರಿಕೆಗೆ ಹೆಸರಾಗಿರುವ ರೋಲ್ಸ್-ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಿದ್ಯಾರ್ಥಿನಿಯರಿಗಾಗಿ ‘Wings4Her Kind Circle Scholarship 2026-27’ ಎಂಬ ಸ್ಕಾಲರ್ ಶಿಪ್ ಯೋಜನೆ ಘೋಷಿಸಿದೆ. ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಅವರ ಕೋರ್ಸ್ ಮತ್ತು ಅಗತ್ಯಕ್ಕೆ ಅನುಗುಣವಾಗಿ 75 ಸಾವಿರ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ. ಕರ್ನಾಟಕದ ವಿದ್ಯಾರ್ಥಿನಿಯರಿಗೂ ಸ್ಕಾಲರ್ ಶಿಪ್ ದೊರೆಯಲಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ.
ಅರ್ಹತೆಗಳು ಏನೇನು?
• ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹಹರು
• ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಎಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆದಿರಬೇಕು
• ಹಿಂದಿನ ತರಗತಿಗಳಲ್ಲಿ (10 ಅಥವಾ 12ನೇ ತರಗತಿ) ಕನಿಷ್ಠ 60%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
• ಕುಟುಂಬದ ವಾರ್ಷಿಕ ಆದಾಯವು 4 ಲಕ್ಷ ರೂ.ಗಿಂತ ಕಡಿಮೆ ಇರಬೇಕು
ಬೇಕಾಗುವ ದಾಖಲೆಗಳು
ಹಿಂದಿನ ಸಾಲಿನ ಅಂಕಪಟ್ಟಿ
ಆಧಾರ್ ಕಾರ್ಡ್ ಅಥವಾ ಯಾವುದಾದರೂ ಸರ್ಕಾರಿ ಗುರುತಿನ ಚೀಟಿ.
ಪ್ರಸ್ತುತ ಸಾಲಿನ ಪ್ರವೇಶಾತಿ ದಾಖಲೆ
ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ
ಬ್ಯಾಂಕ್ ಖಾತೆ ವಿವರಗಳು
ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ?
ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದಲ್ಲಿ ಎಂಜಿನಿಯರಿಂಗ್ ಪದವಿ ಅಧ್ಯಯನ ಮಾಡುತ್ತಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು https://www.buddy4study.com/page/rolls-royce-wings4her-scholarship-for-women-engineering-students ವೆಬ್ ಸೈಟ್ ಗೆ ಭೇಟಿ ನೀಡಬೇಕು. ಮೊಬೈಲ್ ನಂಬರ್ ಅಥವಾ ಇ-ಮೇಲ್ ಐಡಿ ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.


















