ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (CHFWS Bengaluru Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ, ಬೆಂಗಳೂರು
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 23
ನ್ಯೂರಾಲಜಿಸ್ಟ್ ಹಾಗೂ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್, ಡಿಎಂ, ಡಿ.ಎನ್.ಬಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ 1.5 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ http://hfwcom.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಅರ್ಜಿ ಸಲ್ಲಿಸಬೇಕಾದ ವಿಳಾಸ
Mental Health Section, 6th Floor west wing, Arogya Soudha, Magadi Road, Bengaluru – 560023



















