ಬೆಂಗಳೂರು: ರಾಜ್ಯದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 4.0ಗೆ ಇಂದು ಚಾಲನೆ ದೊರೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಅಭಿಯಾನ ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಮಾಗಡಿ ರಸ್ತೆಯ ಆರೋಗ್ಯ ಸೌಧ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಯುವಜನರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ತಂಬಾಕು ಉತ್ಪನ್ನಗಳ ಬಳಕೆ ತಡೆಗಟ್ಟಲು ಈ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

















