ರಷ್ಯಾದ ಸೇನಾ ಸಾರಿಗೆ ವಿಮಾನ ಸೈಬೀರಿಯಾದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 19 ಜನರು ಮೃತಪಟ್ಟಿದ್ದಾರೆ. ನಿನ್ನೆ ಹಾರಾಟ ನಡೆಸುತ್ತಿದ್ದಾಗ ವಿಮಾನದ 4 ಎಂಜಿನ್ಗಳ ಪೈಕಿ ಒಂದರಲ್ಲಿ ಇಂಧನ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ರಷ್ಯಾ ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.
ಜನವಸತಿ ರಹಿತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ವಿಮಾನ ಪತನವಾಗುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.


















