ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲಿರುವ ಕೇಂದ್ರೀಯ ವಿದ್ಯುತ್ ಸಂಶೋಧನಾಲಯ ಸಂಸ್ಥೆಯಲ್ಲಿ (CPRI Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದು ಜೂನಿಯರ್ ರಿಸರ್ಚ್ ಫೆಲೋ ಹಾಗೂ ಒಂದು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯುತ್ ಸಂಶೋಧನಾಲಯ ಸಂಸ್ಥೆ (CPRI)
ಹುದ್ದೆಗಳ ಹೆಸರು: ಜೆ.ಆರ್.ಎಫ್ ಮತ್ತು ಎಸ್.ಆರ್.ಎಫ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 27
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಫಿಲ್ ಹಾಗೂ ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂಪಾಯಿಯಿಂದ 42 ಸಾವಿರ ರೂಪಾಯಿವರೆಗೆ ಫೆಲೋಶಿಪ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cpri.res.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಿ
ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮುಖ್ಯ ಆಡಳಿತಾಧಿಕಾರಿ,
ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ,
ಪ್ರೊ. ಸರ್ ಸಿ.ವಿ. ರಾಮನ್ ರಸ್ತೆ, ಪೋಸ್ಟ್ ಬಾಕ್ಸ್ ಸಂಖ್ಯೆ 8066,
ಸದಾಶಿವ ನಗರ ಅಂಚೆ ಕಚೇರಿ, ಬೆಂಗಳೂರು – 560080.



















