ಬೆಂಗಳೂರು: ನೀವೇನಾದರೂ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಪಾಸಾಗಿ, ರಾಜ್ಯ ಸರ್ಕಾರದ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕಲಬುರಗಿಯಲ್ಲಿರುವ ಜಿಲ್ಲಾ ಇ-ನ್ಯಾಯಾಲಯದಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 18 ಪ್ಯೂನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಕಲಬುರಗಿ
ಒಟ್ಟು ಹುದ್ದೆಗಳು: 18
ಹುದ್ದೆಗಳ ಹೆಸರು: ಪ್ಯೂನ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 15
4 ಪ್ಯೂನ್, 5 ಸ್ಟೆನೋಗ್ರಾಫರ್, 6 ಪ್ರೊಸೆಸ್ ಸರ್ವರ್, 1 ಡ್ರೈವರ್ ಹಾಗೂ 2 ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 100 ರೂ. ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಹನ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರ ಬಳಿ ಡ್ರೈವಿಂಗ್ ಲೈಸೆನ್ಸ್ ಇರುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆkalaburagi.dcourts.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
- ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.



















