ವಿಜಯನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೂಡ್ಲಿಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬೇಕು ಹಾಗೂ ತಕ್ಷಣವೇ ಮೇವು ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಅಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಮತ್ತು ಗೋವಿಂದಗಿರಿಯ ಕುರಿಗಾಯಿಗಳ ಸಂಕಷ್ಟಕ್ಕೆ ಪರಿಹಾರ ನೀಡಬೇಕು ಎಂದು ರೈತ ಸಂಘ ಆಗ್ರಹಿಸಿದೆ. ತಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕೂಡ್ಲಿಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

















