ಬೆಂಗಳೂರು: ಹುಬ್ಬಳ್ಳಿಯಲ್ಲೇ ನೀವು ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರೈಲ್ವೆ ಇಲಾಖೆಯ ನೈಋತ್ಯ ರೈಲ್ವೆ ವಿಭಾಗದಲ್ಲಿ (South Western Railway Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಟಾದಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನೈಋತ್ಯ ರೈಲ್ವೆ
ಒಟ್ಟು ಹುದ್ದೆಗಳು: 11
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 13
ಉದ್ಯೋಗ ಸ್ಥಳ: ಹುಬ್ಬಳ್ಳಿ, ಕರ್ನಾಟಕ
3 ಗ್ರೂಪ್ ಸಿ ಹಾಗೂ 8 ಗ್ರೂಪ್ ಡಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರು, ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 500 ರೂ. ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ rrchubli.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















