ಬೆಂಗಳೂರು: ನೀವು ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ NLC India ಕಂಪನಿಯಲ್ಲಿ (NLC India Recruitment 2026) ಖಾಲಿ ಇರುವ 143 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಎನ್.ಎಲ್.ಸಿ ಇಂಡಿಯಾ
ಒಟ್ಟು ಹುದ್ದೆಗಳು: 143
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 14
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್www.nlcindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು.



















