ಬೆಂಗಳೂರು: ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 27 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು: ಟೆಕ್ಸ್ ಟೈಲ್ ಇನ್ ಸ್ಪೆಕ್ಟರ್
ಒಟ್ಟು ಹುದ್ದೆ: 27
ಉದ್ಯೋಗ ಸ್ಥಳ: ರಾಜ್ಯಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 16
ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 22 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 5 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಜವಳಿ ಮತ್ತು ಕೈಮಗ್ಗ ವಿಭಾಗದಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು, ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 54,175 – 99,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cetonline.karnataka.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು.



















