ಬೆಂಗಳೂರು: ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 1 ಹುದ್ದೆಗಳ ನೇಮಕಾತಿಗಾಗಿ (KVAFSU Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಯಂಗ್ ಪ್ರೊಫೇಷನಲ್-2 ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು
ಒಟ್ಟು ಹುದ್ದೆಗಳು: 1
ಹುದ್ದೆಗಳ ಹೆಸರು: ಯಂಗ್ ಪ್ರೊಫೇಷನಲ್-2
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಡಿಸೆಂಬರ್ 3
ನೇಮಕಾತಿ ಹೊಂದಿದವರು ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಪಶುವೈದ್ಯಕೀಯ ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿರುವ ರೇಬೀಸ್ ರೋಗನಿರ್ಣಯ ಪ್ರಯೋಗಾಲಯದಲ್ಲಿ ಕೆಲಸ ಮಾಡಬೇಕಾಗುತ್ತದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್ ಹಾಗೂ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ 25 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು kvafsu.edu.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಹಾಗೆಯೇ, ಸಂದರ್ಶನಕ್ಕೂ ಮೊದಲು ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು ನವೆಂಬರ್ 28ರೊಳಗೆ rdlkvafsucva@gmail.comಗೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಚೇಂಬರ್ ಆಫ್ ಡೀನ್, ಪಶುವೈದ್ಯಕೀಯ ಕಾಲೇಜು, KVAFSU, ಹೆಬ್ಬಾಳ, ಬೆಂಗಳೂರು – 560024.


















