ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಎಂದು ಬಯಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಣ್ಣ ಉದ್ಯಮಗಳ ಕಾರ್ಪೊರೇಷನ್ ನಲ್ಲಿ (NSIC Recruitment 2026) ಖಾಲಿ ಇರುವ 83 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಸಣ್ಣ ಉದ್ಯಮಗಳ ಕಾರ್ಪೊರೇಷನ್ (NSIC)
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 83
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 14
ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿಎ, ಸಿಎಂಎ, ಎಲ್.ಎಲ್.ಬಿ, ಪದವಿ ಹಾಗೂ ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 45 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.6 ಲಕ್ಷ ರೂ. ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ http://nsic.co.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು.


















