ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಧಾರವಾಡದಲ್ಲಿರುವ ಕೇಂದ್ರೀಯ ವಿದ್ಯಾಲಯ ಸಂಘಟನಾ (KVS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ), ಮ್ಯೂಸಿಕ್ ಟೀಚರ್ ಹಾಗೂ ಕಂಪ್ಯೂಟರ್ ಇನ್ಸ್ಟ್ರಕ್ಟರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯಾಲಯ ಸಂಘಟನೆ, ಧಾರವಾಡ
ಹುದ್ದೆ ಹೆಸರು: ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ) ಇತ್ಯಾದಿ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಧಾರವಾಡ
ಸಂದರ್ಶನದ ದಿನಾಂಕ: ನವೆಂಬರ್ 25
ಸಂದರ್ಶನಕ್ಕೆ ಹಾಜರಾಗಬಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಯುಸಿ, ಬಿಎ, ಎಂಬಿಬಿಎಸ್, ಡಿಪ್ಲೋಮಾ, ಬಿಎ ಬಿ.ಎಡ್, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ dharwad.kvs.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Kendriya Vidyalaya Sangathan Dharwad PIN 580002. ನಿಗದಿತ ದಿನಾಂಕದಂದು ಬೆಳಗ್ಗೆ 9ರಿಂದ ಸಂದರ್ಶನ ಆರಂಭವಾಗಲಿದೆ.



















