ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿಯ ನಡುವೆ ಇಂದು ಮತ್ತು ನಾಳೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.


















