ಬೆಂಗಳೂರು: ನೀವೇನಾದರೂ ಉತ್ತರ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕಾರವಾರದಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ (KVS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯಾಲಯ, ಕಾರವಾರ
ಹುದ್ದೆ ಹೆಸರು: ಶಿಕ್ಷಕರು
ಒಟ್ಟು ಹುದ್ದೆಗಳು: 9
ಉದ್ಯೋಗ ಸ್ಥಳ: ಕಾರವಾರ
ಸಂದರ್ಶನದ ದಿನಾಂಕ: ನವೆಂಬರ್ 28
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪಿಯುಸಿ, ಸ್ನಾತಕೋತ್ತರ ಪದವಿ, ಬಿ.ಎಡ್, ಬಿ.ಟೆಕ್, ಬಿ.ಇ, ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 27,500 ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ karwar.kvs.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
PM SHRI Kendriya Vidyalaya Karwar, Naval Base, Karwar



















