ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ಸಹೋದರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ವಿನಯ ಕುಲಕರ್ಣಿ ಅವರಿಗೆ ಇಂದು ಜೈಲಾ ಅಥವಾ ಬೇಲಾ ಎಂಬುದು ನಿರ್ಧಾರವಾಗಲಿದೆ.


















