ದೋಹಾ: ಕ್ರಿಕೆಟ್ ದಿಗ್ಗಜ ಎಬಿ ಡಿವಿಲಿಯರ್ಸ್ ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಭಾರತದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಮುರಿದಿದ್ದಾರೆ. ದೋಹಾದಲ್ಲಿ ನವೆಂಬರ್ 24ರಂದು ನಡೆದ ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯ ಯುಎಇ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 53 ಎಸೆತಗಳಲ್ಲಿ 204 ರನ್ ಗಳಿಸಿದ್ದಾರೆ.ಈ ಮೂಲಕ 384.90 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ವೈಭವ್, 2015ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎಬಿಡಿ 338.63 ಸ್ಟ್ರೈಕ್ ರೇಟ್ನಲ್ಲಿ 149 ರನ್ ಗಳಿಸಿ ನಿರ್ಮಿಸಿದ್ದ 11 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಏಕದಿನ ಹಾಗೂ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸ್ಟ್ರೈಕ್ ರೇಟ್ನಲ್ಲಿ ಶತಕ ಹಾಗೂ ದ್ವಿಶತಕ ಸಿಡಿಸಿದ ಹೊಸ ದಾಖಲೆ ವೈಭವ್ ಪಾಲಾಗಿದೆ. ಅಲ್ಲದೆ ಈ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 28 ಸಿಕ್ಸರ್ಗಳನ್ನು ಬಾರಿಸುವ ಮೂಲಕ ವೃತ್ತಿಪರ ಕ್ರಿಕೆಟ್ ಮತ್ತು ಲಿಸ್ಟ್ ಎ ಇತಿಹಾಸದ ಒಂದೇ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ನೂತನ ವಿಶ್ವ ದಾಖಲೆಯನ್ನೂ ನಿರ್ಮಿಸಿದ್ದಾರೆ.


















