ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ತೆಂಗು ಅಭಿವೃದ್ಧಿ ಮಂಡಳಿಯಲ್ಲಿ (CDB Recruitment 2026) ಖಾಲಿ ಇರುವ 35 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಷನ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ತೆಂಗು ಅಭಿವೃದ್ಧಿ ಮಂಡಳಿ
ಹುದ್ದೆಗಳ ಹೆಸರು: ಲೋವರ್ ಡಿವಿಷನ್ ಕ್ಲರ್ಕ್ ಇತ್ಯಾದಿ
ಒಟ್ಟು ಹುದ್ದೆಗಳು: 35
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 21
ಉದ್ಯೋಗ ಸ್ಥಳ: ದೇಶಾದ್ಯಂತ
ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟಂಟ್ ಡೈರೆಕ್ಟರ್, ಲೋವರ್ ಡಿವಿಷನ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ, ಸಿಎ, ಸಿಎಂಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ coconutboard.gov.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಿ



















