ಬೆಂಗಳೂರು : ಚಿತ್ರದುರ್ಗ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಚಿತ್ರದುರ್ಗದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Chitradurga Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ
ಹುದ್ದೆಯ ಹೆಸರು: ಕ್ಲಿನಿಕಲ್ ಸೈಕಾಲಜಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 4
ಉದ್ಯೋಗ ಸ್ಥಳ: ಚಿತ್ರದುರ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 5
ಎರಡು ಕ್ಲಿನಿಕಲ್ ಸೈಕಾಲಜಿಸ್ಟ್, ಎರಡು ಸೈಕೆಯಾಟ್ರಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್, ಎಂಡಿ, ಡಿ.ಎನ್.ಬಿ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.10 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ nhm.karnataka.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the District Mental Health Programme Implementation Officer, Office of the District Health and Family Welfare Officer, Chitradurga.


















