ವಿಜಯನಗರ: ಜಿಲ್ಲೆಯ ಹೊಸಪೇಟೆ ತಾ.ಮರಿಯಮ್ಮನಹಳ್ಳಿಯ ಮಗಿಮಾವಿನಹಳ್ಳಿ ಕ್ರಾಸ್ ಬಳಿ ನಿನ್ನೆ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಏಕಾಏಕಿ ಯು ಟರ್ನ್ ತೆಗೆದುಕೊಂಡ ಕಂಟೇನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗುಂಡಾ ಗ್ರಾಮದ ಇಪ್ಪತ್ತೆರಡು ವರ್ಷದ ಬೈಕ್ ಸವಾರ ವಿ. ಅನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಹಿಂಬದಿ ಕುಳಿತಿದ್ದ ಶಿವರಾಮ್ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















