ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಅನಪೇಕ್ಷಿತ ದಾಖಲೆಯೊಂದನ್ನು ಬರೆದಿದ್ದಾರೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲೆ ಓವಲ್ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಜೈಸ್ವಾಲ್ 6 ಎಸೆತಗಳನ್ನು ಎದುರಿಸಿ ಮ್ಯಾಟ್ ಹೆನ್ರಿ ಬೌಲಿಂಗ್ನಲ್ಲಿ ಶೂನ್ಯಕ್ಕೆ ಬೌಲ್ಡ್ ಆಗಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಸ್ಪೆಷಲಿಸ್ಟ್ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ ತಮ್ಮ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ವೃತ್ತಿಜೀವನದ 65 ಇನ್ನಿಂಗ್ಸ್ಗಳಲ್ಲಿ ಒಟ್ಟು 7 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಆದರೆ ಈವರೆಗೆ 59 ಇನ್ನಿಂಗ್ಸ್ಗಳನ್ನು ಆಡಿರುವ ಯಶಸ್ವಿ ಜೈಸ್ವಾಲ್ ಒಟ್ಟು 8 ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಕೊಹ್ಲಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
















