ಬೆಂಗಳೂರು: ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 450 ಹುದ್ದೆಗಳ ನೇಮಕಾತಿಗಾಗಿ (KFD Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 450 ಬೀಟ್ ಫಾರೆಸ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಬೀಟ್ ಫಾರೆಸ್ಟರ್
ಒಟ್ಟು ಹುದ್ದೆ: 450
ಉದ್ಯೋಗ ಸ್ಥಳ: ಕರ್ನಾಟಕದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 22
ಅರ್ಜಿ ಸಲ್ಲಿಸಲು ಬಯಸುವವರು ಪಿಯುಸಿ ಪಾಸಾಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 18ರಿಂದ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿಯವರಿಗೆ 750 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 500 ರೂ. ಇದೆ. ಮಾಜಿ ಸೈನಿಕರಿಗೆ 250 ರೂ. ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ aranya.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು



















