ಬೆಂಗಳೂರು: ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನ ನಡೆಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (GTTC Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ
ಹುದ್ದೆ ಹೆಸರು: ಸಹಾಯಕ ಪ್ರಾಧ್ಯಾಪಕ ಇತ್ಯಾದಿ
ಒಟ್ಟು ಹುದ್ದೆ: 7
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 11
1 ಅಸಿಸ್ಟಂಟ್ ಪ್ರೊಫೆಸರ್, 3 ಅಸಿಸ್ಟಂಟ್ ಮ್ಯಾನೇಜರ್ ಹಾಗೂ 3 ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂ.ಫಿಲ್, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 37ರಿಂದ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.67 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ gttc.karnataka.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು



















