ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಕೈಗೊಳ್ಳಲಾಗಿದೆ.
ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎರಡೂ ಟರ್ಮಿನಲ್ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೆ ಕೂಡ ನಿಗಾ ವಹಿಸಲಾಗಿದೆ. ವಿಐಪಿ ಲೈನ್ ನಲ್ಲಿ ಪಾರ್ಕಿಂಗ್ ಅವಧಿಯನ್ನು ಅರ್ಧ ಗಂಟೆಯಿಂದ 5 ನಿಮಿಷಕ್ಕೆ ಇಳಿಸಲಾಗಿದೆ. ಅಲ್ಲದೇ, ಭದ್ರತಾ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲಾಗಿದ್ದು, ಮೂರು ಪಾಳಯದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.