ನೀಲಿ ತಾರೆ ಸೋಫಿಯಾ ಲಿಯೋನ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಸೋಫಿಯಾ ತನ್ನ 26ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದ್ದಾರೆ. ಅವರ ಶವ ಅವರು ಇರುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ. ಆಕೆಯ ಮಲತಂದೆ ಮೈಕ್ ರೊಮೆರೊ ಈ ಕುರಿತು ಖಚಿತಪಡಿಸಿದ್ದಾರೆ. ಸೋಫಿಯಾ ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ.
ಸೋಫಿಯಾ ಲಿಯೋನ್ ಸಾವಿನಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ತಾಯಿ ಮತ್ತು ಕುಟುಂಬದ ಪರವಾಗಿ, ನಮ್ಮ ಪ್ರೀತಿಯ ಸೋಫಿಯಾ ಅವರ ನಿಧನದ ಸುದ್ದಿಯನ್ನು ನಾನು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋಫಿಯಾ 18ನೇ ವಯಸ್ಸಿನಲ್ಲಿಯೇ ನೀಲಿ ಚಿತ್ರಗಳನ್ನು ಕಾಣಿಸಿಕೊಳ್ಳಲು ಆರಂಭಿಸಿದ್ದರು.