ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಆರೋಗ್ಯ ಚೇತರಿಸಿಕೊಂಡಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಿದೆ. ಹೀಗಾಗಿ ಅವರು ಐಪಿಎಲ್ ನಲ್ಲಿ ಮಿಂಚಲು ಸಿದ್ಧರಾಗಿದ್ದಾರೆ.
ರಿಷಬ್ ಪಂತ್ ಈ ಬಾರಿಯ ಐಪಿಎಲ್ ನಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಅವರ ಆರೋಗ್ಯ ಚೇತರಿಕೆಯಾಗಿದ್ದು, ಅಕಾಡೆಮಿ ಫಿಟ್ ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಿದೆ. ಹೀಗಾಗಿ ಅವರು ತಂಡದಲ್ಲಿ ಸೇರ್ಪಡೆಯಾಗಬಹುದು. ಹಿಂದಿನ ವರ್ಷ ಜ. 1ರಂದು ಬೆಳಿಗ್ಗೆ ಭೀಕರ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಂಡಿದ್ದಾರೆ.
ಅಪಘಾತದಿಂದಾಗಿ ಪಂತ್ 2023ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್ ನಿಂದ ದೂರವಾಗಿದ್ದರು. ಈಗ ಮತ್ತೆ ಮೈದಾನಕ್ಕೆ ಇಳಿಯುತ್ತಿದ್ದು ಫಾರ್ಮ್ ಕಂಡುಗೊಳ್ಳಬೇಕಿದೆ.