ದೇಶದಲ್ಲಿ ಚುನಾವಣಾ ಕಾವು ಜೋರಾಗಿದೆ. ಪ್ರತಿಯೊಂದು ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಹಲವು ಅಚ್ಚರಿಯ ಹೆಸರುಗಳು ಕೂಡ ಹೊರ ಹೊಮ್ಮುತ್ತಿವೆ.
ಟೀಮ್ ಇಂಡಿಯಾ ಮಾಜಿ ಆಟಗಾರ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ 42 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಯೂಸುಫ್ ಪಠಾಣ್ ಹೆಸರಿದೆ.
ಯೂಸುಫ್ ಬಂಗಾಳದ ಬರ್ಹಾಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರವನ್ನು ಹಿಂದಿನ ಬಾರಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಗೆದ್ದು ಲೋಕಸಭೆ ಪ್ರವೇಶಿಸಿದ್ದರು. ಸದ್ಯ ಹಾಲಿ ಸಂಸದರ ವಿರುದ್ಧವೇ ಯೂಸುಫ್ ಪಠಾಣ್ ಕಣಕ್ಕೆ ಇಳಿದಿದ್ದಾರೆ.
ಗುಜರಾತ್ ಮೂಲದ ಯೂಸುಫ್ ಪಠಾಣ್ ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಹೀಗಾಗಿ ಅವರನ್ನು ಕಣಕ್ಕೆ ಇಳಿಸಲಾಗಿದೆ.
ಭಾರತದ ಮಾಜಿ ಆಟಗಾರ ಯೂಸುಫ್ 57 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಪಠಾಣ್ 810 ರನ್ ಗಳಿಸಿದ್ದಾರೆ. ಅಲ್ಲದೇ, 33 ವಿಕೆಟ್ ಕಿತ್ತಿದ್ದಾರೆ. ಟಿ20ಯಲ್ಲಿ 22 ಪಂದ್ಯ ಆಡಿ 236 ರನ್ ಗಳಿಸಿದ್ದಾರೆ.