ಮದುವೆಗೆ ಮೆರವಣಿಗೆಗೆ ಹೊರಟಿದ್ದ ಮೆರವಣಿಗೆಗೆ ಡ್ರಕ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 11 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಕನಿಷ್ಠ 11 ಜನ ಗಾಯಗೊಂಡಿದ್ದಾರೆ. ಮೆರವಣಿಗೆ ಹೊರಟಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 45ರ ಘಾಟ್ ಖಮಾರಿಯಾ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾಧಿಕಾರಿ ಅರವಿಂದ್ ಕುಮಾರ್ ದುಬೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ಸೆಹ್ವಾಲ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಘಟನೆಯಿಂದಾಗಿ ತೀವ್ರ ದುಃಖ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಂತ್ರಸ್ತರ ಸಂಬಂಧಿಕರಿಗೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.