ಮುಂಬೈ: ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಮೋಘ ಜಯ ಸಾಧಿಸಿದ ನಂತರ ಭಾರತ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮತ್ತೊಮ್ಮೆ ನಂ.1 ಪಟ್ಟ ಅಲಂಕರಿಸಿದ್ದಾರೆ.
ಹೀಗಾಗಿ ಐಸಿಸಿ ವಿಶೇಷ ಪೋಸ್ಟರ್ ಹಂಚಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಡ್ರಾನಲ್ಲಿ ಅಂತ್ಯಗೊಂಡ ನಂತರ ಭಾರತ ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ ನಂ.1 ಸ್ಥಾನ ಕಳೆದುಕೊಂಡಿತ್ತು. ಆಗ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಟೀಂ ಇಂಡಿಯಾದ ಕನಸನ್ನು ಭಗ್ನಗೊಳಿಸಿದ್ದ ಆಸ್ಟ್ರೇಲಿಯಾ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದುಕೊಂಡಿತ್ತು. 2 ತಿಂಗಳ ನಂತರ ಭಾರತ ಮತ್ತೆ ಅಗ್ರಸ್ಥಾನಕ್ಕೆ ಬಂದು ನಿಂತಿದೆ.
6 ತಿಂಗಳ ಬಳಿಕ ಟೆಸ್ಟ್, ಏಕದಿನ ಹಾಗೂ T20 ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಅಗ್ರಸ್ಥಾನಕ್ಕೇರಿದ್ದು ಇತಿಹಾಸ ಬರೆದಿದೆ.