ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ ಆಟಗಾರ ವಿಶ್ವ ದಾಖಲೆ ಬರೆದಿದ್ದಾರೆ.
ಅಪ್ಘಾನ್ ವಿರುದ್ಧ 2 ಬೌಂಡರಿ ಬಾರಿಸುವ ಮೂಲಕ ಐರ್ಲೆಂಡ್ ಆರಂಭಿಕ ಆಟಗಾರ ಪೌಲ್ ಸ್ಟಿರ್ಲಿಂಗ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬೌಂಡರಿಗಳೊಂದಿಗೆ ಎಂಬುವುದು ವಿಶೇಷ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400ಕ್ಕೂ ಅಧಿಕ ಬೌಂಡರಿ ಬಾರಿಸುವುದರ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ಪಾಕಿಸ್ತಾನದ ಬಾಬರ್ ಆಝಂ ಹೆಸರಿನಲ್ಲಿತ್ತು. ಬಾಬರ್ 103 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 395 ಬೌಂಡರಿ ಬಾರಿಸಿದ್ದರು. ಸದ್ಯ ಪೌಲ್ ಸ್ಟಿರ್ಲಿಂಗ್ 134 ಟಿ20 ಇನಿಂಗ್ಸ್ ಗಳಲ್ಲಿ ಒಟ್ಟು 401 ಫೋರ್ ಬಾರಿಸಿದ್ದಾರೆ. ಈ ಮೂಲಕ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.
ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದ್ದು, 109 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 361 ಫೋರ್ ಗಳನ್ನು ಬಾರಿಸಿದ್ದಾರೆ.