ಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು, ಮಂಡ್ಯ ಕ್ಷೇತ್ರಕ್ಕೆ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಈಗ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದರ ಮಧ್ಯೆ ಕಳೆದ ಬಾರಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲ ಜೆಡಿಎಸ್ ನಾಯಕರು ಮಂಡ್ಯ ಟಿಕೆಟ್ ನಮಗೆ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ.
ಸಿಎಸ್ ಪುಟ್ಟರಾಜು ಹೆಸರು ಕೂಡ ನಿಖಿಲ್ ನಂತರ ಇತ್ತು. ಆದರೆ, ಹಲವು ಲೆಕ್ಕಾಚಾರಗಳ ನಂತರ ಈಗ ಕುಮಾರಸ್ವಾಮಿ ಸ್ಪರ್ಧೆಗೆ ಮುಂದಾಗಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಕಣಕ್ಕೆ ಇಳಿದರೆ, ಅವರಿಗೆ ಪ್ರಭಲ ಸ್ಪರ್ಧಿ ಕಾಂಗ್ರೆಸ್ ನಲ್ಲಿ ಇಲ್ಲದಂತಾಗುತ್ತದೆ. ಕುಮಾರಸ್ವಾಮಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಕಾರ್ಯಕರ್ತರಲ್ಲಿ ಕೂಡ ಹೊಸ ಹುರುಪು ಬರಲಿದೆ ಎಂಬುವುದು ಜೆಡಿಎಸ್ ಲೆಕ್ಕಾಚಾರ.
ಇನ್ನೊಂದೆಡೆ ಸುಮಲತಾ ಕೂಡ ಕುಮಾರಸ್ವಾಮಿ ಸ್ಪರ್ಧೆಗೆ ವಿರೋಧ ಮಾಡುವುದಿಲ್ಲ ಎನ್ನಲಾಗುತ್ತಿದೆ. ಆದರೂ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.