ಹಾವೇರಿ: ನಿಶ್ಚಿತಾರ್ಥ ಮಾಡಿಕೊಂಡು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ವಿಷ ಕುಡಿಸಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಹತ್ತಿರ ನಡೆದಿದೆ.
ಹತ್ಯೆಗೀಡಾದ ಯುವತಿಯನ್ನು ದೀಪಾ ಗೊಂದಿ (21) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮಾಲತೇಶ್ ಬಾರ್ಕಿ (35) ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಆರೋಪಿ ಮಾಲತೇಶ್, ಸೊಸೆ ದೀಪಾಳೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ನಿಶ್ಚಿತಾರ್ಥದ ನಂತರ ಮಾವನೊಂದಿಗೆ ಮದುವೆಯಾಗಲು ಯುವತಿ ನಿರಾಕರಿಸಿದ್ದಳು ಎನ್ನಲಾಗಿದೆ.
ಇದರಿಂದ ಕೋಪಗೊಂಡ ಮಾಲತೇಶ್, ಯುವತಿಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ವಿಷ ಕುಡಿಸಿದ್ದಾನೆ. ನಂತರ ನೇಣು ಬಿಗಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.