ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ತಾಲೀಮು ನಡೆಸಿದ್ದು, ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೆ 50 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತದೆ. ಅಕ್ರಮದ ಮೂಲಕ ಸಂಪತ್ತು ಗಳಿಸಿದ ಶ್ರೀಮಂತರು ವಿರೋಧ ಪಕ್ಷಗಳಲ್ಲಿ ಮಾತ್ರ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಬಿಜೆಪಿಯೇ ಭ್ರಷ್ಟಾಚಾರದ ಮೂಲ ಪಿತಾಮಹರು ಎಂದು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿಗೂ ಆಪರೇಷನ್ ಕಮಲಕ್ಕೆ ಪ್ರಯತ್ನ ನಡೆಯುತ್ತಿದೆ. ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ 50 ಕೋಟಿ ರೂ. ಮಿಷವೊಡ್ಡತ್ತಿದ್ದಾರೆ. ಚುನಾವಣಾ ವೆಚ್ಚಕ್ಕೂ ಹಣ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.