ಪಾಪಿಗಳ ಗುಂಪೊಂದು ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನ ಡನೆದಿದೆ.
ಈ ಘಟನೆ ಮಹಾರಾಷ್ಟ್ರದ ಬದ್ಲಾಪುರ್ ನಲ್ಲಿ ನಡೆದಿದೆ. ಸಂಜೆ ವೇಳೆ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬರುವ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. 4ನೇ ತರಗತಿಯಲ್ಲಿ ಓದುತ್ತಿದ್ದ ಇಬಾದ್, ಸಂಜೆ ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳಿದ್ದ. ಆದರೆ, ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತಂಕ ಗೊಂಡಿದ್ದರು. ಹುಡುಕಾಟ ನಡೆಸಿದ್ದಾರೆ.
ಆನಂತರ ಪೋಷಕರಿಗೆ ಅನಾಮಧೇಯ ಕರೆ ಬಂದಿದ್ದು, ಆತನನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಅಲ್ಲದೇ, 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಕೂಡಲೇ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರು. ಫೋನ್ ಟ್ರೇಸ್ ಮಾಡಿ ಆರೋಪಿ ಮನೆ ತಲುಪುವಷ್ಟರಲ್ಲಿ ಭಯದಿಂದ ಆರೋಪಿಗಳು ಇಬಾದ್ ನನ್ನು ಕೊಂದು ಗೋಣಿಚೀಲದಲ್ಲಿ ಶವವನ್ನು ತುಂಬಿ ಮನೆಯ ಹಿಂದೆ ಬಚ್ಚಿಟ್ಟಿದ್ದಾರೆ. ಸದ್ಯ ಗೋಣಿಚೀಲವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.