ಚಿಕ್ಕಮಗಳೂರು: ಬೈಕ್ ಹಾಗೂ ಬೊಲೆರೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಸಾವನ್ನಪ್ಪಿದ ದುರೈದವ ದಂಪತಿ. ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















