ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಬೌಲಿಂಗ್ ಗೆ ಕಾರಣವಾಗಿರುವ ಮುಂಬೈ ತಂಡಕ್ಕೆ ತೀವ್ರ ಆಘಾತ ಉಂಟಾಗಿದೆ.
5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ನೋವು ಎದುರಾಗಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 277 ರನ್ ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಈ ಅಪಕೀರ್ತಿ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 31 ರನ್ ಗಳಿಂದ ಸೋಲು ಕಂಡಿದೆ. ಈ ಸೋಲಿನ ಬೆನ್ನಲ್ಲೇ ಮುಂಬೈ ತಂಡದ ಮಾಲೀಕರಾದ ಆಕಾಶ್ ಅಂಬಾನಿ ರೋಹಿತ್ ಶರ್ಮಾ ಅವರೊಂದಿಗೆ ದೀರ್ಘಕಾಲದ ಚರ್ಚೆ ನಡೆಸಿದ್ದಾರೆ.
ಈ ಚರ್ಚೆಯ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗೆ ಇಳಿಸಿ ಹಾರ್ದಿಕ ಪಾಂಡ್ಯಗೆ ಅವಕಾಶ ನೀಡಿತ್ತು. ಆದರೆ, ಮೊದಲೆರಡು ಪಂದ್ಯಗಳಲ್ಲಿ ಮುಂಬೈ ನಿರೀಕ್ಷಿತ ಫಲಿತಾಂಶ ತೋರಿಸಿಲ್ಲ. ಅದರಲ್ಲೂ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ರನ್ ನೀಡಿದ ಅಪಖ್ಯಾತಿ ಮುಂಬೈ ಇಂಡಿಯನ್ಸ್ ಪಾಲಾಗಿದ್ದಕ್ಕೆ ಫ್ರಾಂಚೈಸಿಯ ಬೇಸರಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆಕಾಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೋಹಿತ್ ಶರ್ಮಾರೊಂದಿಗೆ ಚರ್ಚೆ ನಡೆಸಿದ್ದಾರೆ.
ಇದು ನಾಯಕತ್ವ ಬದಲಾವಣೆಯ ಮುನ್ಸೂಚನೆ ಎಂದು ರೋಹಿತ್ ಶರ್ಮಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.