ಮಂಗಳೂರು: ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಹೊರವಲಯದ ಅಡ್ಯಾರ್ ಡ್ಯಾಂ ಹತ್ತಿರ ನಡೆದಿದೆ. ಅಡ್ಯಾರ್ ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಸಾವನ್ನಪ್ಪಿದವರು ಎನ್ನಲಾಗಿದೆ. ಮೃತದೇಹಗಳು ಹರೇಕಳ ಸೇತುವೆ ಹತ್ತಿರ ಪತ್ತೆಯಾಗಿವೆ.
ಸಾವನ್ನಪ್ಪಿದ ತಾಯಿ ಮಗುವಿನ ಹುಟ್ಟು ಹಬ್ಬ ಆಚರಿಸಿದ್ದರು. ಆನಂತರ ತಾಯಿ ಹಾಗೂ ಮಗು ನಾಪತ್ತೆಯಾಗಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂತರ ಹುಡುಕಾಟ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ.