ನಟ ರಿಷಿ ಅಭಿನಯದ ರಾಮನ ಅವತಾರ ಮೇ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎನ್ನಲಾಗಿದೆ.
ಭಿನ್ನ ವಿಭಿನ್ನ ಚಿತ್ರಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿರುವ ನಟ ರಿಷಿ ಈಗ ಮತ್ತೊಂದು ಕಾಮಿಡಿ ಹಾಗೂ ಥ್ರಿಲ್ಲರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ‘ಕವಲುದಾರಿ’ ಚಿತ್ರದ ಗಂಭೀರತೆಯ ನಂತರ ಈಗ ‘ರಾಮನ ಅವತಾರ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಚಿತ್ರ ತಂಡ ಪ್ರಚಾರ ಕಾರ್ಯ ನಡೆಸುತ್ತಿದೆ. ಮೇ ತಿಂಗಳ 10ನೇ ತಾರೀಖು ‘ರಾಮನ ಅವತಾರ’ ಸಿನಿಮಾ ರಾಜ್ಯದಾದ್ಯಂತ ತೆರೆಗೆ ಬರಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರ ತಂಡ ಮೇ 10ರಂದು ಬಿಡುಗಡೆಗೆ ಮುಂದಾಗಿದೆ.
ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯಾಗಿ ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಗೆ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಹಾಗೂ ಹಾಡುಗಳು ಜನರಿಗೆ ಇಷ್ಟ ಆಗಿವೆ. ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಚಿತ್ರದ ಶೂಟಿಂಗ್ ನಡೆದಿದೆ.