ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವಣ್ಣ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಚಿಕಿತ್ಸೆಯ ನಂತರ ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ದಿನ ಆಸ್ಪತ್ರೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಶಿವಣ್ಣ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಹಾಗೂ ಕಿಡ್ನಿ ಸ್ಟೋನ್ ಆಗಿತ್ತು ಎಂಬ ಮಾಹಿತಿ ಗೊತ್ತಾಗಿದೆ. ಡಿಸ್ಚಾರ್ಜ್ ಆದ ನಂತರ ಅವರು ಪ್ರಚಾರಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ಅವರು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಒಂದೇ ದಿನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ದೇವನಹಳ್ಳಿ ಬಳಿ ಚಿತ್ರೀಕರಣದ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರಿಗೆ ಸುಸ್ತಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಪರೀಕ್ಷೆಗಳನ್ನ ಮಾಡಿಸಿ ರಿಪೋರ್ಟ್ ಪಡೆದು, ಚಿಕಿತ್ಸೆ ನೀಡಲಾಗಿದೆ.