ಬೆಂಗಳೂರು: ಇಲ್ಲಿಯ ನಗರತ್ ಪೇಟೆಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಕೂಡ ಎಫ್ ಐಆರ್ ದಾಖಲಾಗಿದೆ.
ಮಾ. 17ರಂದು ಈ ಪ್ರಕರಣ ನಡೆದಿದ್ದು, ಮೊಬೈಲ್ ಶಾಪ್ ಮಾಲೀಕನ ಮೇಲೆ ಹನುಮಾನ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿತ್ತು. ಸದ್ಯ ಹಲ್ಲೆಗೊಳಾಗದ ಮುಖೇಶ್ ವಿರುದ್ಧ ಕೂಡ ಎಫ್ ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಂತರ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಅದನ್ನು ನನ್ನ ಮಗ ಹಾಗೂ ಆತನ ಸ್ನೇಹಿತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತನ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರೋಪಿಯ ತಾಯಿ ಮಾರನೇ ದಿನವೇ ದೂರು ನೀಡಿದ್ದರು.
ಕಳೆದ ಮಾ.17 ರಂದು ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು.