ಬೆಳಗಾವಿ: ಮಗಳು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಯಾರೂ ಬರುವುದು ಬೇಡ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ವಿಡಿಯೋ ಮಾಡಿ ಮನವಿ ಮಾಡಿರುವ ಸತೀಶ್ ಜಾರಕಿಹೊಳಿ, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕಾರ್ಯಕರ್ತರು ಕೂಡ ಬರುವುದು. ಹೆಚ್ಚು ಜನ ಸೇರುವುದು ಬೇಡ. ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ ವೈಯಕ್ತಿಕ ಟೀಕೆ ಬೇಡ. ಪ್ರವಾಹದ ಸಂದರ್ಭದಲ್ಲಿ ಅಣ್ಣಾಸಾಹೇಬ್ ಜೊಲ್ಲೆ ವಿದೇಶದಲ್ಲಿದ್ದರು ಎಂದು ಟ್ರೋಲ್ ಮಾಡಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ವೈಯಕ್ತಿಕ ಟೀಕೆ ಮಾಡಬೇಡಿ. ಕೇವಲ ರಾಜಕೀಯ ಆರೋಪಗಳಿಗೆ ಮಾತ್ರ ಸೀಮಿತವಾಗಿರಲಿ. ಎಲ್ಲರೂ ಅವರ ವೈಫಲ್ಯ ಹೇಳುವ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.