ದೆಹಸಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಕಾರ್ಯಕರ್ತರು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ದೇಶ ಹಾಗೂ ಜಗತ್ತಿನಲ್ಲಿರುವ ಕೇಜ್ರಿವಾಲ್ ಬೆಂಬಲಿಗರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಕಾರ್ಯಕರ್ತರು ಹೇಳಿದ್ದಾರೆ.
ಈ ಉಪವಾಸ ಸತ್ಯಾಗ್ರಹ ಕಾರ್ಯಕ್ರಮ ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ನಡೆಯಲಿದೆ. ದೆಹಲಿ ಸರ್ಕಾರದ ಆಪ್ ಸಚಿವರು ಗೋಪಾಲ್ ರೈ ಪ್ರಕಾರ, ಆಮ್ ಆದ್ಮಿ ಪಕ್ಷದ ಶಾಸಕರು, ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. 25 ರಾಜ್ಯಗಳಲ್ಲಿನ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.