ಆಂಧ್ರ ಗಡಿಯಲ್ಲಿ ಬಾರೀ ಪ್ರಮಾಣದ ಸ್ಪೋಟಕಗಳು ಪತ್ತೆ ಕೋಲಾರ: ರಾಜ್ಯ ಹಾಗೂ ಆಂಧ್ರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್ ಪೋಸ್ ಬಳಿ ನಡೆದಿದೆ. ಆರೋಪಿಗಳು ತಾಲೂಕಿನ ಚೆಕ್ ಪೋಸ್ಟ್ ಮುಖಾಂತರ ಕಾರಿನಲ್ಲಿ 1,200 ಜಿಲೆಟಿನ್ ಕಡ್ಡಿ, 7 ಬಾಕ್ಸ್ ವೈಯರ್, 6 ಡಿಟೋನೇಟರ್ ಸಾಗಿಸುತ್ತಿದ್ದರು. ಈ ಸಂದರ್ಭದಲ್ಲಿ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಸತ್ಯ ಬಯಲಿಗೆ ಬಂದಿದೆ. ಸ್ಫೋಟಕ ಸಾಗಿಸುತ್ತಿದ್ದ ಜಾಕೀರ್ ಹುಸೇನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾನೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸದ್ಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.