ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಗೋರಖ್‌ಪುರ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಅನಾರೋಗ್ಯದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಹೃದಯ ಸಂಬಂಧಿ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ನಿಶಾದ್ ಪತಿ ಸಂಜಯ್ ಮಾಹಿತಿ ನೀಡಿದ್ದಾರೆ.
ಕಾಜಲ್ ನಿಶಾದ್ (41) ಗೋರಖ್‌ಪುರ ಕ್ಷೇತ್ರದಿಂದ ನಟ ಮತ್ತು ಹಾಲಿ ಬಿಜೆಪಿ ಸಂಸದ ರವಿ ಕಿಶನ್ ಶುಕ್ಲಾ ವಿರುದ್ಧ ಸ್ಪರ್ಧಿಸಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮೂರ್ಛೆ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಕೂಡ ಹಬ್ಬಿದೆ. ಪಕ್ಷದ ಮುಖಂಡರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.