ಬೆಂಗಳೂರು: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಹೋಟೆಲ್ ವೊಂದರ ಪರವಾನಿಗೆ ನೀಡುವುದಕ್ಕಾಗಿ ಕಾರ್ಮಿಕ ಇಲಾಖೆ ಇನ್ಸ್ ಪೆಕ್ಟರ್ ಬೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಹೀಗಾಗಿ ಮಂಗಳೂರು ಮೂಲದ ಹೋಟೆಲ್ ವ್ಯಾಪಾರಿ ದೀಕ್ಷಿತ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೀಗಾಗಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ನಡೆಸಿ ಲಂಚುಕೋರನನ್ನು ಬಂಧಿಸಿದ್ದಾರೆ.
ಕಾರ್ಮಿಕ ಭವನದಲ್ಲಿಯೇ ಆರೋಪಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.